IBPS EXAM INFORMATION

"IBPS: ಆಗಸ್ಟ್ 16, 2017ರಿಂದ ಅರ್ಜಿ ಸಲ್ಲಿಕೆ ಪ್ರಾರಂಭ"


2017 ನೇ ಸಾಲಿನ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ಅಧಿಸೂಚನೆ ಹೊರಡಿಸಿದೆ.

ಸುಮಾರು ಮೂರುವರೆ ಸಾವಿರ ಹುದ್ದೆಗೆಳ ನೇಮಕಾತಿ ನಡೆಯುತ್ತಿದ್ದು, ಐಬಿಪಿಎಸ್ ತನ್ನ ವೆಬ್ಸೈಟ್ ನಲ್ಲಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 16 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 5 ರವರೆಗೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಕ್ಟೋಬರ್ ತಿಂಗಳಲ್ಲಿ ಪೂರ್ವಭಾವಿ ಪರೀಕ್ಷೆಗಳು ನಡೆಯಲಿದ್ದು, ಪ್ರವೇಶ ಪತ್ರಗಳನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಐಬಿಪಿಎಸ್ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.
ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕುಗಳ ಪ್ರೊಬೆಷನರಿ ಆಫೀಸರ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಎರಡು ಹಂತದ ಪರೀಕ್ಷೆ.

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಎರಡು ಹಂತದ ಪರೀಕ್ಷಾ ವಿಧಾನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುವುದು.

ಪೂರ್ವಭಾವಿ ಪರೀಕ್ಷೆಯನ್ನು ಕೇವಲ ಅರ್ಹತಾ ಪರೀಕ್ಷೆಯಾಗಿ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಕೇವಲ ನೂರು ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪ್ರತಿ ಪ್ರಶ್ನೆಗೂ ಒಂದೊಂದು ಅಂಕ ನಿಗದಿಪಡಿಸಿದ್ದು, ಉತ್ತರಿಸಲು ಒಂದು ಗಂಟೆ ಕಾಲಾವಕಾಶ ನೀಡಲಾಗಿರುತ್ತದೆ. ಅಂದರೆ ನೂರು ಪ್ರಶ್ನೆಗಳಿಗೆ ಉತ್ತರಿಸಲು ಕೇವಲ 60 ನಿಮಿಷ ಸಿಗಲಿದೆ.

ಪೂರ್ವಭಾವಿ ಪರೀಕ್ಷೆಯಲ್ಲಿ ಮೂರು ವಿಭಾಗಗಳಿರಲಿವೆ. ಇಂಗ್ಲಿಷ್ ಭಾಷೆಗೆ ಸಂಬಂಧಿಸಿದ 30 ಪ್ರಶ್ನೆಗಳಿದ್ದರೆ, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್'ನ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ.

ಈ ಪರೀಕ್ಷೆಯಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅರ್ಹತೆ ಅಂಕ ಗಳಿಸಿದವರು ಮಾತ್ರ ಮುಖ್ಯ ಪರೀಕ್ಷೆ ಬರೆಯಲು ಅರ್ಹರಾಗುತ್ತಾರೆ.

'ಮುಖ್ಯ ಪರೀಕ್ಷೆ'ಯು ಒಟ್ಟು 200 ಅಂಕಗಳಿಗೆ ನಡೆಯಲಿದ್ದು, ಎರಡು ಗಂಟೆ ಕಾಲಾವಕಾಶ ನೀಡಲಾಗಿರುತ್ತದೆ. ಈ ಪರೀಕ್ಷೆಯಲ್ಲಿ ಒಟ್ಟು ಐದು ವಿಭಾಗಗಳಿರಲಿವೆ.
ರೀಸನಿಂಗ್ ಪೇಪರ್ -50,
ಇಂಗ್ಲಿಷ್ ಭಾಷೆ -40,
ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ -50,
ಜನರಲ್ ಅವೇರ್ನೆಸ್ -40
 ಹಾಗೂ
ಕಂಪ್ಯೂಟರ್ ನಾಲೆಡ್ಜ್ -20
 ಅಂಕ ನಿಗದಿಪಡಿಸಲಾಗಿರುತ್ತದೆ.

ಜನರಲ್ ಅವೇರ್ನೆಸ್ನಲ್ಲಿ ಮುಖ್ಯವಾಗಿ ಬ್ಯಾಂಕ್ ಉದ್ಯಮ ಮತ್ತು ಆರ್ಥಿಕತೆಗೆ ಸಂಬಂಧಿಸಿದ ಪ್ರಶ್ನೆಗಳನ್ನೇ ಕೇಳಲಾಗುತ್ತದೆ.
ಈ ಪರೀಕ್ಷೆಯಲ್ಲಿ 200 ಪ್ರಶ್ನೆಗಳಿಗೆ ಉತ್ತರಿಸಲು 120 ನಿಮಿಷ ಕಾಲಾವಕಾಶ ದೊರೆಯಲಿದೆ.

ಇಂಗ್ಲಿಷ್ ಭಾಷೆ ಒಂದನ್ನು ಹೊರತು ಪಡಿಸಿ ಮತ್ತೆಲ್ಲಾ ಪ್ರಶ್ನೆ ಪತ್ರಿಕೆಗಳನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಒದಗಿಸಲಾಗುತ್ತದೆ.

ಸರಿಯುತ್ತರಕ್ಕೆ ಅಂಕ ನೀಡಿದಂತೆಯೇ ತಪ್ಪು ಉತ್ತರಕ್ಕೆ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. (ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕ ಕಡಿತ ಮಾಡಲಾಗುತ್ತದೆ).
ಒಂದು ವೇಳೆ ಉತ್ತರ ಗೊತ್ತಿಲ್ಲದೆ, ಹಾಗೆಯೇ ಬಿಟ್ಟಿದ್ದಲ್ಲಿ, ಯಾವುದೇ ಅಂಕವನ್ನು ಕಳೆಯಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಕೈಪಿಡಿಯಲ್ಲಿ ಮಾಹಿತಿ ಪರೀಕ್ಷೆಯ ಬಗ್ಗೆ, ಸಿಲಬಸ್ನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಒಳಗೊಂಡ ಮಾರ್ಗದರ್ಶಿ ಕೈಪಿಡಿಯನ್ನು ಐಬಿಪಿಎಸ್ ವೆಬ್ಸೈಟ್ ನಲ್ಲಿ ಲಭ್ಯವಿದೆ. ಅಗತ್ಯವಿದ್ದವರು ಕೈಪಿಡಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಪರೀಕ್ಷಾ ಕೇಂದ್ರದಲ್ಲಿ ಪೂರ್ವಭಾವಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಸುಮಾರು 2 ಗಂಟೆ ಹಾಗೂ ಮುಖ್ಯ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಸುಮಾರು 3 ಗಂಟೆ ಇರಬೇಕಾಗುತ್ತದೆ. ಪರೀಕ್ಷಾ ಕೇಂದ್ರಕ್ಕೆ ಗುರುತು ಪತ್ರ ತಂದಿರಬೇಕು.

ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಸಂದರ್ಶನಕ್ಕೆ ಒಟ್ಟು 100 ಅಂಕ ನಿಗದಿಯಾಗಿದ್ದು, ಇದರಲ್ಲಿ ಶೇ.40ಕ್ಕಿಂತ (ಎಸ್ಸಿ/ಎಸ್ಟಿ ಅಭ್ಯರ್ಥಿಗಳು ಶೇ. 35) ಹೆಚ್ಚು ಅಂಕ ಪಡೆಯಬೇಕು.

*****
Karnataka Educations

Comments

Popular posts from this blog

Karnataka SSLC Board Exam Result 2024 | How to Check Karnataka SSLC Exam Result 2024

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

SSLC Social Science New Text Book Question Ans | 10ನೇ ತರಗತಿ ಸಮಾಜ ವಿಜ್ಞಾನ ಹೊಸ ಪಠ್ಯಪುಸ್ತಕದ ಪ್ರಶ್ನೋತ್ತರಗಳು |

Middle Adds

amezon