Karnataka Govt Scholarships | After SSLC Scholarships | SSLC ನಂತರ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನಗಳು |

Karnataka Govt Scholarships :
SSLC ನಂತರ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನಗಳು :
ಕರ್ನಾಟಕ ರಾಜ್ಯ ಸರ್ಕಾರದಿಂದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದೂಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಲಕ್ಷಾಂತರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಾಯ ಮಾಡುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರವಲ್ಲದ ದೇಶ ಮತ್ತು ವಿದೇಸಗಳಲ್ಲಿ ಅಧ್ಯಯನ ಮಾಡಲು ಸಹ ಈ ವಿದ್ಯಾರ್ಥಿವೇತನಗಳು ನೀಡಲಾಗುತ್ತಿದೆ.

ಪ್ರಮುಖ ಅಂಶಗಳು :
* ಕರ್ನಾಟಕದ ವಿದ್ಯಾರ್ಥಿಗಳಿಗೆ ಇರುವ ವಿದ್ಯಾರ್ಥಿವೇತನಗಳು.
* SSLC ನಂತರ ಇರುವ ವಿದ್ಯಾರ್ಥಿವೇತನಗಳು.
* ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನಗಳು.
* ವಿವಿಧ ಇಲಾಖೆಗಳಿಂದ ದೊರೆಯುವ ವಿದ್ಯಾರ್ಥಿವೇತನಗಳು.
* ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನಗಳು.


ಪ್ರತಿವರ್ಷವು ಸಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಮತ್ತು ವಿವಿಧ ಸಂಘ ಸಂಸ್ಥೆಗಳಿಂದಲೂ ಸಹ ವಿದ್ಯಾರ್ಥಿವೇತನಗಳನ್ನು ನೀಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದೂಳಿದ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಪ್ರತಿ ವರ್ಷ ವಿವಿಧ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿ ವೇತನವನ್ನು ನೀಡುತ್ತಿವೆ. ಸರ್ಕಾರದಿಂದ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಜೋತೆಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಅನೂಕೂಲವಾಗುತ್ತದೆ.



ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಈ ವಿದ್ಯಾರ್ಥಿವೇತನಗಳು ಬದಲಾಯಿಸುತ್ತಿವೆ. ದೇಶದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ನೀಡುವ ಕೆಲವು ಜನಪ್ರೀಯ ವಿದ್ಯಾರ್ಥಿವೇತನಗಳ ಪಟ್ಟಿ ಇಲ್ಲಿದೆ. 
ಸಾಂದೀಪನಿ ವಿದ್ಯಾರ್ಥಿವೇತನ:
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭವೃದ್ಧಿ ಮಂಡಳಿಯಿಂದ ಈ ವಿದ್ಯಾರ್ಥಿವೇತನವನ್ನು ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಈ ವಿದ್ಯಾರ್ಥಿವೇತನ ನೀಡುವ ಉದ್ದೇಶಗಳು:
* ಪಠ್ಯಪುಸ್ತಕದ ವೆಚ್ಚವನ್ನು ಭರಿಸಲು
* ಎಲೆಕ್ಟ್ರಾನಿಕ ಉಪಕರಣಗಳನ್ನು ಮತ್ತು ಸಲಕರಣೆಗಳನ್ನು ಖರಿದಿಸಲು.
* ಹಾಸ್ಟೇಲ್ ಶುಲ್ಕ
* ಸಂಚಾರ, ಬಸ್ ಪಾಸ್ ಮತ್ತು ಇತರೆ ವೆಚ್ಚಗಳಿಗಾಗಿ ನೀಡಲಾಗುತ್ತಿದೆ.
ಈ ವಿದ್ಯಾರ್ಥಿವೇತನ ಪಡೆಯಲು ಇರಬೇಕಾದ ಅರ್ಹತೆಗಳು :
* ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕು.
* ಅರ್ಜಿಯೊಂದಿಗೆ EWS ಪ್ರಮಾಣಪತ್ರ ಮತ್ತು ಬ್ರಾಹ್ಮಣ ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು.
* SSLC ನಂತರ ಸರ್ಕಾರಿ ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಮಾನ್ಯತೆ ಪಡೆದ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರಬೇಕು.
* ಈ ವಿದ್ಯಾರ್ಥಿವೇತನವನ್ನು ಶೇ 33 ರಷ್ಟನ್ನು ವಿದ್ಯಾರ್ಥಿನಿಯರಿಗೆ ನೀಡಲಾಗುತ್ತದೆ. ಶೇ 5 ರಷ್ಟನ್ನು ವಿಶೇಷ ಚೇತನರಿಗೆ ನೀಡಲಾಗುತ್ತದೆ. 

ರೈತ ಮಕ್ಕಳಿಗೆ ವಿದ್ಯಾರ್ಥಿವೇತನ :
ರೈತ ಮಕ್ಕಳಿಗೆ ಕರ್ನಾಟಕ ಸರ್ಕಾರದಿಮದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ರೈತರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ತಡೆಗಟ್ಟುವುದು. ಈ ಯೋಜನೆಯನ್ನು 2021ರಲ್ಲಿ ಜಾರಿಗೆ ತರಲಾಗಿದೆ.
SSLC ಪರೀಕ್ಷೆಯಲ್ಲಿ ಉತ್ತೀರ್ನರಾಗಿ ವಿವಿಧ ಕೋರ್ಸುಗಳಿಗೆ ಸೇರುವ ರೈತ ಮಕ್ಕಳಿಗೆ ನೆರವಾಗಲು ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ವಾರ್ಷಿಕವಾಗಿ ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ PUC, ITI, Diploma, ಕೋರ್ಸುಗಳಿಗೆ ಪ್ರವೇಶ ಪಡೆದವರಿಗೆ 2,500 ರೂಪಾಯಿಗಳನ್ನು ನೀಡಲಾಗುತ್ತದೆ.

SC ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ:
ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ಟಿಕ್ ನಂತರದ ವಿದ್ಯಾರ್ಥಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ಹನಕಾಸಿನ ನೆರವು ನೀಡಲಾಗುತ್ತದೆ. 
* ಕೋರ್ಸು ಶುಲ್ಕ 8 ಲಕ್ಷದಿಂದ 15 ಲಕ್ಷದವರೆಗೆ ಇದ್ದರೆ ಶುಲ್ಕದ ಶೇ 50 ಭಾಗವನ್ನು ವಿದ್ಯಾರ್ಥಿವೇತನ ನೀಡಲಾಗುತ್ತದೆ.

ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಿಗುವ ವಿದ್ಯಾರ್ಥಿವೇತನಗಳು :
ಹಿಂದೂಳಿದ ವರ್ಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ 
* ವಿದ್ಯಾಸಿರಿ
* ಆಹಾರ ಮತ್ತು ವಸತಿ
* ಶುಲ್ಕ ಮರುಪಾವತಿ
* ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
ಇವುಗಳನ್ನು ನೀಡಲಾಗುತ್ತಿದೆ.

ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿವೇತನ :
ಕರ್ನಾಟಕ ಕಾರ್ಮಿಕ ಮಂಡಳಿಯಿಂದ ಅಸಂಘಟಿತ ಕಾರ್ಮಿಕರ ಕುಟುಂಬಗಳ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ವಿವಿಧ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. 
* 8 ರಿಂದ 10ನೇ ತರಗತಿವರೆಗೆ ಓದುತ್ತಿರುವವರಿಗೆ - ವರ್ಷಕ್ಕೆ 3000 ರೂಪಾಯಿ ನೀಡಲಾಗುತ್ತಿದೆ.
* PUC ITI Diploma ಓದುತ್ತಿರುವ ವಿದ್ಯಾರ್ಥಿಗಳಿಗೆ 4,000 ರೂಪಾಯಿ.
* ಪದವಿ ಕೋರ್ಸು ಓದುತ್ತಿರುವವರಿಗೆ 5,000 ರೂಪಾಯಿ
* ಸ್ನಾತಕೋತ್ತರ ಕೋರ್ಸು ಓದುತ್ತಿರುವವರಿಗೆ 6,000 ರೂಪಾಯಿ
* ಇಂಜಿನಿಯರಿಂಗ್ / ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವವರಿಗೆ ವರ್ಷಕ್ಕೆ 10,000 ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಈ ವಿದ್ಯಾರ್ಥಿವೇತನಕ್ಕೆ ಇರಬೇಕಾದ ಅರ್ಹತೆಗಳು :
* ಹಿಂದಿನ ವರ್ಷದ ಅಂತಿಮ ಪರೀಕ್ಷೆಯಲ್ಲಿ ಸಾಮಾನ್ಯ ಅಭ್ಯರ್ಥಿಗಳು 50% ಮತ್ತು ಎಸ್.ಸಿ. ಮತ್ತು ಎಸ್.ಟಿ. ವಿದ್ಯಾರ್ಥಿಗಳು 45% ಅಂಕಗಳನ್ನು ಸಂಪಾದಿಸಿರಬೇಕು. 

ಇವುಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ?
ವಿವಿಧ ವಿದ್ಯಾರ್ಥಿವೇತನಗಳನ್ನು ರಾಜ್ಯವಿದ್ಯಾರ್ಥಿವೇತನ ತಂತ್ರಾಂಶಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದು.

Comments

Popular posts from this blog

Karnataka SSLC Board Exam Result 2024 | How to Check Karnataka SSLC Exam Result 2024

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

SSLC Social Science New Text Book Question Ans | 10ನೇ ತರಗತಿ ಸಮಾಜ ವಿಜ್ಞಾನ ಹೊಸ ಪಠ್ಯಪುಸ್ತಕದ ಪ್ರಶ್ನೋತ್ತರಗಳು |

Middle Adds

amezon