SSLC Science Passing Package 2023 | 10th Class Science Passing package 2023

SSLC Science Passing Package 2023 | 10th Class Science Passing package 2023

ಭೌತಶಾಸ್ತ್ರ: ಕಾರಣ ಕೊಡಿ ಪ್ರಶ್ನೆಗಳು


1) ಶುಭ್ರ ಆಕಾಶದ ಬಣ್ಣ ನೀಲಿ ಏಕೆ?

ಉ: ವಾಯುಮಂಡಲದಲ್ಲಿ ಗಾಳಿಯ ಅಣುಗಳು ಗೋಚರ ಬೆಳಕಿನ ತರಮಗಾಂತರಕ್ಕಿಂತ ಸಣ್ಣದಾಗಿರುತ್ತದೆ. ಇವು ಸೂರ್ಯನ ಬೆಳಕಿನ ಉಳಿದೆಲ್ಲಾ ಬಣ್ಣಗಳಿಗಿಂತ ಸಣ್ಣ ತರಂಗಾತರವುಳ್ಳ ನೀಲಿ ಅಂಚನ್ನು ಹೆಚ್ಚು ಚದುರಿಸುತ್ತದೆ.

2) ಕಾಮನ ಬಿಲ್ಲು ಹೇಗೆ ಉಂಟಾಗುವುದು?

ಉ: ವಾತಾವರಣದಲ್ಲಿರುವ ಸಣ್ಣ ನೀರಿನ ಹನಿಗಳಿಂದ ಉಂಟಾಗುವ ಸೂರ್ಯಕಿರಣಗಳ ವರ್ಣವಿಭಜನೆಯಿಂದ ಕಾಮನ ಬಿಲ್ಲು ಉಂಟಾಗುತ್ತದೆ. ಕಾಮನ ಬಿಲ್ಲು ಯಾವಾಗಲೂ ಸೂರ್ಯನ ವಿರುದ್ಧ ದಿಕ್ಕಿನಲ್ಲಿ ಉಂಟಾಗುತ್ತದೆ.

3) ಅತಿ ಎತ್ತರದಲ್ಲಿ ಹಾರುತ್ತಿರುವ ಪ್ರಯಾಣಿಕರಿಗೆ ಆಕಾಶವು ಕಪ್ಪಾಗಿ ಕಾಣುತ್ತದೆ.

ಉ: ಏಕೆಂದರೆ ಅಂತಹ ಎತ್ತರದಲ್ಲಿ ಬೆಳಕಿನ ಚದುರುವಿಕೆ ಗೋಚರಿಸುವುದಿಲ್ಲ. (ವಾಯುಮಂಡಲ ಇಲ್ಲದಿರುವುದು)

4) ಗ್ರಹಗಳು ಮಿನುಗುವುದಿಲ್ಲ ಏಕೆ?

ಉ: ನಾವು ಒಂದು ಗ್ರಹವನ್ನು ಹಲವಾರು ಬಿಂದು ಗಾತ್ರದ ಬೆಳಿನ ಮೂಲಗಳ ಒಂದು ಸಂಗ್ರಹ ಎಂದು ಭಾವಿಸಿದರೆ ಒಟ್ಟು ಎಲ್ಲಾ ಬಿಂದುಗಳಿಂದ ನಮ್ಮ ಕಣ್ಣನ್ನು ತಲುಪುವ ಬೆಳಕಿನ ವ್ಯತ್ಯಾಸವು ಎಲ್ಲಾ ಬಿಂದುಗಳ ಬೆಳಗಿನ ಸರಾಸರಿ ಹತ್ತಿರುವಾಗುತ್ತದೆ. ಇದರಿಂದಾಗಿ ಗ್ರಹಗಳ ಮಿನುಗುವಿಕೆ ಶೂನ್ಯವಾಗಿದೆ.

5) ಅಪಾಯ ಸಂಕೇತ ದೀಪಗಳು ಕೆಂಪು ಬಣ್ಣದಲ್ಲಿರುತ್ತವೆ ಏಕೆ?

ಉ: ಕೆಂಪು ಬಣ್ಣದ ಚದುರುವಿಕೆ ಕನಿಷ್ಟವಾಗಿರುತ್ತದೆ ಆದ್ದರಿಂದ ಹೊಗೆ ಮತ್ತು ಮಂಚಿನಲ್ಲಿ ದೂರದಿಂದಲೂ ಅದೇ ಬಣ್ಣ ಕಾಣಬಹುದು.

6) ನಕ್ಷತ್ರಗಳು ಮಿನುಗುತ್ತವೆ ಏಕೆ?

ಉ: ನಕ್ಷತ್ರಗ ಬೆಳಕು ಭೂಮಿಯ ವಾಯುಮಂಡಲವನ್ನು ಪ್ರವೇಶಿಸಿ, ಭೂಮಿಯನ್ನು ತಲುಪುವ ಮುನ್ನ ಸತತವಾಗಿ ವಕ್ರೀಭವನ ಹೊಂದುತ್ತದೆ. ಆದ್ದರಿಂದ ನಕ್ಷತ್ರಗಳು ಮಿನುಗುತ್ತವೆ.

7) ಶೀಘ್ರ ಸೂರ್ಯೋದಯ ಮತ್ತು ವಿಳಂಬಿತ ಸೂರ್ಯಾಸ್ತ ಗೋಚರಿಸಲು ಕಾರಣವೇನು?

ಉ: ವಾಯುಂಡಲದಲ್ಲಿನ ವಕ್ರೀಭನದ ಕಾರಣ ಸೂರ್ಯನು ವಾಸ್ತವ ಸೂರ್ಯೋದಯಕ್ಕಿಂತ ಎರಡು ನಿಮಿಷ ಮೊದಲು ಹಾಗೂ ವಾಸ್ತವ ಸೂರ್ಯಾಸ್ತದ ಎರಡು ನಿಮಿಷ ನಂತರ ನಮಗೆ ಗೋಚರಿಸುತ್ತಾನೆ.

8) ಸೂರ್ಯನು ಮುಂಜಾನೆ ಕೆಂಪಗಿರಲು ಕಾರಣವೇನು?

ಉ: ಮುಂಜಾನೆ ಅಥವಾ ಸಂಜೆಯ ಸಮಯದಲ್ಲಿ ಸೂರ್ಯನ ಕಿರಣಗಳು ದಿಗಂತದ ಬಳಿ ಹೆಚ್ಚಿನ ನೀಲಿ ಬೆಳಕು ಮತ್ತು ಕಡಿಮೆ ದೂರವುಳ್ಳದ್ದಾಗಿದೆ. ಆದ್ದರಿಂದ ಸೂರ್ಯ ಕೆಂಪು ಬಣ್ಣದಿಂದ ಕಾಣುತ್ತಾನೆ.

9) ಟಂಗ್ ಸ್ಟನ್ ಅನ್ನು ವಿದ್ಯುತ್ ಬಲ್ಬ್ ಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ.

ಉ: ಟಂಗ್ ಸ್ಟನ್ ಹೆಚ್ಚಿನ ದ್ರವನಬಿಂದು ಹೊಂದಿದೆ. ಆದ್ದರಿಂದ ವಿದ್ಯುತ್ ಬಲ್ಬ್ ಗಳಲ್ಲಿ ಬಳಸುತ್ತಾರೆ.

10) ಡಂಡಕಾಂತದ ಸಮೀಪ ತಂದ ದಿಕ್ಸೂಚಿಯು ಪಲ್ಲಟಗೊಳ್ಳುತ್ತದೆ ಏಕೆ?

ಉ: ದಿಕ್ಸೂಚಿಯು ಸಣ್ಣ ದಂಡಕಾಂತವಾಗಿದ್ದು ಕಾಂತದ ಸಜಾತೀಯ ದ್ರುವಗಳು ವಿಕರ್ಷಿಸುತ್ತವೆ ಹಾಗು ವಿಜಾತೀಯ ದ್ರುವಗಳು ಆಕರ್ಷಿಸುತ್ತವೆ.

11) ಸುರುಳಿಯ ಒಳಗೆ ಕಾಂತ ಸ್ಥಿರವಾಗಿದ್ದಾಗ ವಿದ್ಯುತ್ ಪ್ರವಾಹವನ್ನು ಉತ್ಪಾದಿಸುವುದಿಲ್ಲ ಏಕೆ?

ಉ: ಸುರುಳಿ ಮತ್ತು ಕಾಂತದ ನಡುವೆ ಸಾಪೇಕ್ಷ ಚಲನೆ ಇಲ್ಲದಿರುವುದರಿಂದ ಮಂಡಲಕ್ಕೆ ಹೊಂದಿಕೊಂಡ ಕಾಂತಕ್ಷೇತ್ರವು ಬದಲಾಗುವುದಿಲ್ಲ.

12) ಎರಡು ಕಾಂತೀಯ ಬಲರೇಖೆಗಳು ಒಂದನ್ನೊಂದು ಛೇದಿಸುವುದಿಲ್ಲ ಏಕೆ?

ಉ: ಎರಡು ಕಾಂತೀಯ ಬಲರೇಖೆಗಳು ಒಂದನ್ನೊಂದು ಛೇದಿಸಿದರೆ ಕಾಂತಸೂಚಿಯು ಎರಡೂ ದಿಕ್ಕುಗಳನ್ನು ನಿರ್ದೇಶಿಸಬೇಕು. ಆದರೆ ಇದು ಸಂಭವನೀಯವಲ್ಲ.

13) ವಿದ್ಯುತ್ ಪ್ರವಹಿಸಿದಾಗ ಸೊಲೆನಾಯ್ಡ್ ನ ಕೇಂದ್ರದಲ್ಲಿ ಪ್ರತಿ ಬಿಂದುವಿನಲ್ಲಿಯೂ ಏಕರೂಪದ ಕಾಂತಕ್ಷೇತ್ರವನ್ನು ಹೊಂದಿರುತ್ತದೆ ಏಕೆ?

ಉ: ಸೊಲೆನಾಯ್ಡ್ ನಲ್ಲಿ ಹಲವು ಸುರುಳಿಯುದ್ದು ಸುರುಳಿ ಕೇಂದ್ರದಲ್ಲಿ ಕಾಂತೀಯ ಬಲರೇಖೆಗಳು ಸಮಾಂತರ ರೇಖೆಗಳಂತೆ ಇರುತ್ತವೆ.

14) ಸೌರಕುಕ್ಕರ್ ನಲ್ಲಿ ಸಮತಲ ದರ್ಪಣವನ್ನು ಬಳಸುತ್ತಾರೆ ಏಕೆ?

ಉ: ಸಮತಲ ದರ್ಪಣವು ಸೌರವಿಕಿರಣವನ್ನು ಪ್ರತಿಫಲಿಸಿ ಪಾತ್ರೆಯ ಮೇಲೆ ಬೀಳುವಂತೆ ಮಾಡುತ್ತದೆ.

15) ನಿಶ್ಚಲ ಸ್ಥಿತಿಯ ಒಂದು ಕಾಂತವು ನಿಶ್ಚಲ ಸ್ಥಿತಿಯಲ್ಲಿರುವ ತಂತಿ ಸುರುಳಿಯಲ್ಲಿ ವಿದ್ಯುತ್ ಚಾಲಕಬಲವನ್ನು ಉಂಟು ಮಾಡುವುದಿಲ್ಲ ಏಕೆ?

ಉ: ಕಾಂತ ಮತ್ತು ತಂತಿ ಸುರುಳಿಯ ಮಧ್ಯೆ ಸಾಪೇಕ್ಷ ಚಲನೆಯು ಉಂಟಾಗದೇ ಇರುವುದರಿಂದ ವಿದ್ಯುತ್ ಚಾಲಕ ಬಲವನ್ನು ಉಂಟು ಮಾಡುವುದಿಲ್ಲ.

****

www.youtube.com/c/jothreddy




Comments

Popular posts from this blog

Karnataka SSLC Board Exam Result 2024 | How to Check Karnataka SSLC Exam Result 2024

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

SSLC Social Science New Text Book Question Ans | 10ನೇ ತರಗತಿ ಸಮಾಜ ವಿಜ್ಞಾನ ಹೊಸ ಪಠ್ಯಪುಸ್ತಕದ ಪ್ರಶ್ನೋತ್ತರಗಳು |

Middle Adds

amezon