ಪ್ರಬಂಧ ಬರೆಯಿರಿ: “ಸ್ವಚ್ಛ ಭಾರತ ಅಭಿಯಾನ” | Swacha Bharata Abhiyana | Kannada Prabhanda |

ಪ್ರಬಂಧ ಬರೆಯಿರಿ: “ಸ್ವಚ್ಛ ಭಾರತ ಅಭಿಯಾನ

1. ಪೀಠಿಕೆ

2. ವಿಷಯ ನಿರೂಪಣೆ

3. ಉಪಸಂಹಾರ



ಸ್ವಚ್ಛ ಭಾರತ ಅಭಿಯಾನ :

ಪೀಠಿಕೆ: ನಮ್ಮ ಆರೋಗ್ಯದ ದೃಷ್ಟಿಯಿಂದ ನಾವು ವಾಸಿಸುವ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ.

ದಿಸೆಯಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಇದು ನಮ್ಮ ಮನೆ ಪರಿಸರದಿಂದಲೇ ಪ್ರಾರಂಭಿಸಬೇಕು.

ವಿಷಯ ನಿರೂಪಣೆ: “ಆರೋಗ್ಯವೇ ಭಾಗ್ಯಎಂಬ ನಾಣ್ನುಡಿ ನಮ್ಮಲ್ಲಿದೆ ಉತ್ತಮ ಆರೋಗ್ಯಕ್ಕೆ ಉತ್ತಮ ಹಾಗೂ ಸ್ವಚ್ಛವಾದ ಪರಿಸರ ಅಗತ್ಯ. ಇದಕ್ಕಾಗಿಯೇ ನಮ್ಮ ಇಂದಿನ ಪ್ರಧಾನ ಮಂತ್ರಿಗಳು ಗಾಂಧೀಜಿಯವರ ಜನ್ಮದಿನವಾದ 02.10.2014 ರಂದು ಸ್ವಚ್ಛ ಭಾರತ ಅಭಿಯಾನವನ್ನು ಪ್ರಾರಂಭಿಸಿದರು.

ಗಾಂಧೀಜಿಯವರು ಹುಟ್ಟಿ 150 ವರ್ಷ ಪೂರ್ಣಗೊಳ್ಳುವ 02.10.2019ಕ್ಕೆ ಯೋಜನೆಯ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಅವಧಿಯಲ್ಲಿ ಸಂಪೂರ್ಣವಾಗಿ ಸ್ವಚ್ಛಭಾರತ ನಿರ್ಮಾಣವಾಗಬೇಕು.

ದಿಸೆಯಲ್ಲಿ ಈಗಾಗಲೇ ಹಳ್ಳಿಗಳಲ್ಲಿ ನಗರಗಳಲ್ಲಿ ತಾವು ವಾಸಿಸುವ  ಪ್ರದೇಶಗಳಲ್ಲಿ ಕೆಲಸ ಮಾಡುವ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನವನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಉತ್ತಮ ಪರಿಸರ ನಿರ್ಮಾಣವಾಗುತ್ತಿದೆ. ತ್ಯಾಜ್ಯ ವಸ್ತುಗಳ ಸಮರ್ಪಕ ವಿಲೇವಾರಿಯಾಗುತ್ತಿದ್ದು ಇನ್ನೂ ಉತ್ತಮಗೊಳ್ಳಬೇಕಿದೆ,

ಜನರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿದೆ. ಸಮೂಹ ಮಾಧ್ಯಮಗಳು ಇದನ್ನು ಯಶಸ್ವಿಗೊಳಿಸುವಲ್ಲಿ ಪೂರ್ಣ ಸಹಕಾರ ನೀಡುತ್ತಿವೆ. ದೇಶದಾದ್ಯಂತ ಅಭಿಯಾನವು ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿರುವುದು ಸಂತೋಷದ ವಿಷಯ.

ಉಪಸಂಹಾರ: ಸ್ವಚ್ಛ ಭಾರತ ನಿರ್ಮಾಣದ ಕನಸನ್ನು ನನಸು ಮಾಡೋಣ. ಯೋಜನೆಯನ್ನು ಸಾಕಾರಗೊಳಿಸುವಲ್ಲಿ ಪ್ರತಿವಾರ ಕೇವಲ ಎರಡು ಗಂಟೆಗಳ ಅವಧಿಯನ್ನು ಮೀಸಲಿಡೋಣ, ಮೂಲಕ ಪ್ರಧಾನ ಮಂತ್ರಿಗಳ ಕನಸನ್ನು ನನಸಾಗಿಸುವುದರ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸೋಣ.

*****



Comments

Popular posts from this blog

Karnataka SSLC Board Exam Result 2024 | How to Check Karnataka SSLC Exam Result 2024

2nd PUC Sociology Notes | ಅಧ್ಯಾಯ-1 | ಭಾರತೀಯ ಸಮಾಜದ ನಿರ್ಮಾಣ ಮತ್ತು ಜನಸಂಖ್ಯಾ ಶಾಸ್ತ್ರ

SSLC Social Science New Text Book Question Ans | 10ನೇ ತರಗತಿ ಸಮಾಜ ವಿಜ್ಞಾನ ಹೊಸ ಪಠ್ಯಪುಸ್ತಕದ ಪ್ರಶ್ನೋತ್ತರಗಳು |

Middle Adds

amezon